*ಸಿ.ಟಿ.ರವಿಗೆ ಕಾಂಗ್ರೆಸ್ ನಾಯಕರಿಂದ ಛೀಮಾರಿ: ಏಕವಚನದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು*
ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರಿಗೆ ಕಾಂಗ್ರೆಸ್ ನಾಯಕರು ಛೀಮಾರಿ ಹಾಕಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಕಾಂಗ್ರೆಸ್ ನಾಯಕರು ಸಭಾಪತಿ ಬಸವರಾಜ್ ಹೊರಟ್ತಿ ಅವರಿಗೆ ದೂರು ನೀಡಿದ್ದು, ಇದೇ ವೇಳೆ ಸಿ.ಟಿ.ರವಿ ಹಾಗೂ ಬಿಜೆಪಿ ಸದಸ್ಯರು ಪ್ರತಿದೂರು ನೀಡಿದರು. ಬಳಿಕ ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸಿ.ಟಿ.ರವಿ ಹಾಗೂ ಬಿಜೆಪಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು.
ಚರ್ಚೆಗೆ ಅವಕಶ ನೀಡುವಂತೆ ಕೋರಿದರು. ಈ ವೇಳೆ ಸಭಾಪತಿ ಹೊರಟ್ಟಿ, ವಿಧಾನಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಸಿ.ಟಿ.ರವಿ ಅವರ ಮಾತು ಖಂಡನೀಯ. ಹೆಣ್ನುಮಕ್ಕಳ ಬಗ್ಗೆ ಅವಾಚ್ಯ ಪದ ಬಳಕೆ, ಆಕ್ಷೇಪಾರ್ಹ ಹೇಳಿಕೆ ಸರಿಯಲ್ಲ. ದೂರು ನೀಡಿದವರು ಇಬ್ಬರೂ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಓರ್ವ ಜನಪ್ರತಿನಿಧಿಯಾಗಿ ಜವಾಬ್ದಾರಿಗಳನ್ನು ಅರಿತು ಮಾತನಾಡಬೇಕು ಎಂದು ಎಚ್ಚರಿಕೆ ನೀಡಿದರು. ಬಳಿಕ ಪರಿಷತ್ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಕಲಾಪ ಮುಂದೂಡಿದ ಬಳಿಕ ಸದನದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಗದ್ದಲ ಕೋಲಾಹಲ ನಡೆಯಿತು. ಈ ವೇಳೆ ಕಾಂಗ್ರೆಸ್ ಸದಸ್ಯರು ಸಭಾಪತಿ ಪೀಠದ ಬಳಿ ತೆರಳಿ ಬಿಜೆಪಿ ಸದಸ್ಯ ದ್ಸಿ.ಟಿ.ರವಿ ಅವರಿಗೆ ಛೀಮಾರಿ ಹಾಕಿದರು. ನಿನಗೆ ಮಗಳು, ತಾಯಿ ಇಲ್ಲವೇ? ಹೆಂಡತಿ ಇಲ್ಲವೇ? ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗುವ ಬಿಜೆಪಿ ನಾಯಕರು ಹೆಣ್ಣುಮಕ್ಕಳಿಗೆ ಕೊಡುವ ಗೌರವ ಇದೇನಾ? ಎಂದು ತರಾಟೆಗೆ ತೆಗೆದುಕೊಂಡರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ