ಪ್ರಗತಿವಾಹಿನಿ ಸುದ್ದಿ: ಮೂರು ದಶಕದ ಬಳಿಕ ಮೂರನೇ ಬಾರಿ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ.
ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ 130 ಎಕರೆ ಪ್ರದೇಶದಲ್ಲಿ ಈ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, 80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ ಹಾಗೂ ಎರಡು ಸಮಾನಂತರ ವೇದಿಕೆಗಳ ನಿರ್ಮಾಣ ಮಾಡಲಾಗಿದೆ. ಕೆಆರ್ ಎಸ್ ಡ್ಯಾಂ ಮಾದರಿಯಲ್ಲಿ ಪ್ರಧಾನ ವೇದಿಕೆ ನಿರ್ಮಾಣವಾಗಿದೆ.
ಇದೀಗ ಈ ಅದ್ಧೂರಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಸಮ್ಮೇಳನದ ಧ್ವಜಾರೋಹಣ ಮಾಡಿ, ರಾಷ್ಟ್ರ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಿದ್ದಾರೆ.
ರಾಷ್ಟ್ರ ಧ್ವಜಾರೋಹಣದ ಬಳಿಕ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಕನ್ನಡ ಪರಿಷತ್ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಮೀರ ಶಿವಲಿಂಗಯ್ಯರಿಂದ ನಾಡ ಧ್ವಜಾರೋಹಣ ನೆರವೇರಿಸಲಾಯಿತು.
ಧ್ವಜಾರೋಹಣದ ವೇಳೆ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ್, ಸಿಇಓ ಶೇಕ್ ತಸ್ವೀರ್ ಆಸೀಫ್, ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ಉಪಸ್ಥಿತರಿದ್ದರು.
ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದ್ದು, 11 ಗಂಟೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿಕೆಶಿ, ಉಸ್ತುವಾರಿ ಸಚಿವ ಸೇರಿ ಸಚಿವರು, ಶಾಸಕರು, ಸಾಹಿತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ