Election NewsKannada NewsKarnataka NewsNationalPolitics

*ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ*

ಪ್ರಗತಿವಾಹಿನಿ ಸುದ್ದಿ : ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ ನಾಯಕ ಓಂ ಪ್ರಕಾಶ್ ಚೌಟಾಲಾ ಅವರು ಹೃದಯ ಸ್ತಂಭನದಿಂದ ಇಂದು ಮೃತಪಟ್ಟಿದ್ದಾರೆ.

89 ವರ್ಷ ವಯಸ್ಸಾಗಿದ್ದ ಓಂ ಪ್ರಕಾಶ್ ಅವರಿಗೆ ಗುರುಗ್ರಾಮ್‌ನಲ್ಲಿರುವ ನಿವಾಸದಲ್ಲಿ ಹೃದಯ ಸ್ತಂಭನವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಾಗಲೇ ಅವರು ಮೃತಪಟ್ಟಿದ್ದಾರೆ.

ಈ ವರ್ಷದ ಅಕ್ಟೋಬ‌ರ್ 5 ರಂದು ನಡೆದ ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಓಂ ಪ್ರಕಾಶ್ ಚೌಟಾಲಾ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಭಾರತದ ಮಾಜಿ ಉಪ ಪ್ರಧಾನಿ ಚೌಧರಿ ದೇವಿ ಲಾಲ್ ಅವರ ಪುತ್ರ ಓಂ ಪ್ರಕಾಶ್ ಚೌಟಾಲಾ ಅವರು ಹರಿಯಾಣದ ಏಳನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. 7 ಬಾರಿ ಶಾಸಕರಾಗಿರುವ ಓಂ ಪ್ರಕಾಶ್‌ ಚೌಟಾಲಾ ಅವರು 4 ಬಾರಿ ಹರಿಯಾಣದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button