*ಬೆಳಗಾವಿಯಿಂದ ಸಿಟಿ ರವಿ ಬೆಂಗಳೂರಿಗೆ ರವಾನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ ಬಂಧಿತರಾಗಿರುವ ಬಿಜೆಪಿಯ ಎಂಎಲ್‌ಸಿ ಸಿ.ಟಿ.ರವಿ ಅವರ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಬೆಳಗಾವಿಯ 5ನೇ JMFC ಕೋರ್ಟ್ ಆದೇಶಿಸಿದೆ.
ಆದೇಶದ ಬೆನ್ನಲ್ಲೇ ಇದೀಗ ರವಿ ಅವರನ್ನು ಬಿಗಿ ಪೊಲೀಸ್ ಬಂದೋಸ್ತ್ ನಲ್ಲಿ ಬೆಂಗಳೂರಿಗೆ ಶಿಪ್ಟ್ ಮಾಡಲಾಗಿದೆ. ನಿನ್ನೆ ಅಧಿವೇಶನ ಕೊನೆಯ ದಿನದಲ್ಲಿ ರವಿ ಅವರು ಪರಿಷತ್‌ನಲ್ಲೇ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ.
ಸಚಿವೆ ನೀಡಿದ ದೂರಿನಡಿ ಬಿಎನ್‌ಎಸ್ ಕಾಯ್ದೆ ಸೆಕ್ಷನ್ 75 & 79ರಡಿ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ FIR ದಾಖಲಾಗಿತ್ತು. ನಂತರ ಪ್ರಕ್ರಿಯೆ ಮುಗಿದ ಬಳಿಕ, ರವಿ ಅವರನ್ನು ಇಂದು ಬೆಳಗ್ಗೆ ಬೆಳಗಾವಿಯ JMFC ಕೋರ್ಟ್‌ಗೆ ಹಾಜರುಪಡಿಸಲಾಯಿತು.
ಬೆಳಗಾವಿ ನ್ಯಾಯಾಲ ಆವರಣದಲ್ಲಿ ಸಿಟಿ ರವಿ ಅವರನ್ನು ಪೊಲೀಸ್ ವಾಹನದಲ್ಲಿ ಕಳಿಸುವ ವೇಳೆ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ. ಸಿಟಿ ರವಿ ಇರುವ ವಾಹನದ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ , ವಿಪಕ್ಷ ನಾಯಕ ಆರ್ ಅಶೋಕ, ಉಪ ನಾಯಕ ಅರವಿಂದ ಬೆಲ್ಲದ, ಶಾಸಕರಾದ ಅಭಯ ಪಾಟೀಲ್, ವಿಠಲ್ ಹಲಗೇಕರ ಕೂಡಾ ತೆರಳಿದ್ದಾರೆ. ಇನ್ನೂ ಭದ್ರತೆ ದೃಷ್ಟಿಯಿಂದ ಪೊಲೀಸರು ಎಲ್ಲಾ ರೀತಿಯ ಮುಜಾಗೃತ ಕ್ರಮಗಳನ್ನು ವಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ