Belagavi NewsBelgaum NewsKannada NewsKarnataka NewsLatest

ಸಿ.ಟಿ.ರವಿ ವಿರುದ್ಧ ಶನಿವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಧಾನ ಪರಿಷತ್ತಿನಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ಹಿನ್ನೆಲೆಯಲ್ಲಿ ಕೂಡಲೇ ಸಿ.ಟಿ.ರವಿ ಅವರ ಸದಸ್ಯತ್ವ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಎಪಿಎಂಸಿ ಮಾಜಿ ಅಧ್ಯಕ್ಷ ಯುವರಾಜ ಕದಂ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಪ್ರತಿಭಟನೆ ಆಯೋಜಿಸಲು ನಿರ್ಧರಿಸಿದ್ದಾರೆ.

ಶನಿವಾರ ಬೆಳಗ್ಗೆ 11 ಗಂಟೆಗೆ ಸಿಪಿಎಡ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಆಯೋಜಕರು ಕೋರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button