Belagavi NewsBelgaum NewsGamesKannada NewsKarnataka NewsNationalSports

ವಂಚನೆ ಆರೋಪ: ರಾಬಿನ್ ಉತ್ತಪ್ಪ ವಿರುದ್ಧ ವಾರೆಂಟ್ ಜಾರಿ

ಪ್ರಗತಿವಾಹಿನಿ ಸುದ್ದಿ: ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ.

ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರಿಗೆ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸಂಬಳದಲ್ಲಿ ಕಟ್ ಮಾಡಿದ್ದರೂ ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್‌ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ರಾಬಿನ್ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button