ಪ್ರಗತಿವಾಹಿನಿ ಸುದ್ದಿ: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವಿನ ಸರಣಿ ಅಪಘಾತ ಸಂಭವಿಸಿದ್ದು, 6 ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ಮೃತರನ್ನು ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6) ಗುರುತಿಸಲಾಗಿದೆ. ತುಮಕೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕಾರಿನ ಮೇಲೆ ಕಂಟೇನರ್ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಎರಡು ಹೆಣ್ಣು ಮಕ್ಕಳು, ಒಬ್ಬ ಯುವಕ, ಮತ್ತೊರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದರಿಂದ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಟ್ರಾಫಿಕ್ ಕ್ಲೀಯರ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ ಅಪಘಾತದ ವೇಳೆ ಕಂಟೇನರ್ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇದರಿಂದ ಕಾರು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ