Belagavi NewsBelgaum NewsKannada NewsKarnataka NewsNationalPolitics

*ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಪಕ್ಷ ಭೇದ ಮರೆತು ಬರಬೇಕು: ಡಿಕೆಶಿ*

ಪ್ರಗತಿವಾಹಿನಿ ಸುದ್ದಿ : ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಸಂಬಂಧ ಬೆಳಗಾವಿಯ ಸುವರ್ಣಸೌಧ ಬಳಿ ಮಹಾತ್ಮಗಾಂಧೀಜಿ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಲಾಗುತ್ತಿದ್ದು ಪಕ್ಷಬೇಧ ಮರೆತು ಸರ್ಕಾರದ ಕಾರ್ಯಕ್ರಮವನ್ನಾಗಿ ಆಚರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರು ಅಭಿಪ್ರಾಯಪಟ್ಟರು.

ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರೊಂದಿಗೆ ಸಭೆ ನಡೆಸಿ ಕಾರ್ಯಕ್ರಮದ ಸಿದ್ಧತೆ ಕುರಿತಾಗಿ ಚರ್ಚಿಸಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಡಿ.26, 27ರಂದು ಐತಿಹಾಸಿಕ ಸಮಾವೇಶ ನಡೆಯಲಿದೆ. ಸುವರ್ಣಸೌಧ ಬಳಿ ಗಾಂಧೀಜಿ ಅವರ ಪುತ್ಥಳಿಯನ್ನು ಅನಾವರಣ ಕಾರ್ಯಕ್ರಮವಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಉದ್ಘಾಟಿಸಲಿದ್ದಾರೆ. ಭದ್ರತೆ ದೃಷ್ಟಿಯಿಂದ ಕೇವಲ ಶಾಸಕರು, ಸಂಸದರು ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಬರಲು ಅವಕಾಶವಿದ್ದು, ಸಾರ್ವಜನಿಕರಿಗೆ ಅಂದು ಅವಕಾಶವಿಲ್ಲ ಎಂದರು.

ಇನ್ನು ಸಮಾವೇಶದಲ್ಲಿ ದೆಹಲಿಯ ಎಲ್ಲಾ ನಾಯಕರು, ಎಐಸಿಸಿ ಪದಾಧಿಕಾರಿಗಳು, 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದ್ದು, ರಾಜ್ಯದಲ್ಲಿ ಎಲ್ಲಾ ಶಾಸಕರು, ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button