ಪ್ರಗತಿವಾಹಿನಿ ಸುದ್ದಿ: ನೆಟೆ ರೋಗದಿಂದ ಕಲಬುರ್ಗಿ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಹೆಕ್ಟೇರ್ ಹೆಚ್ಚು ತೊಗರಿಬೆಳೆ ನಷ್ಟವಾಗಿದ್ದು, ಇದಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ರೈತ ಮುಖಂಡರು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ನವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಕಲಬುರಗಿಯ ಅನ್ನಪೂರ್ಣ ಕ್ರಾಸ್ ಬಳಿ 377 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲು ಬರುವ ವೇಳೆ ಏಕಾಏಕಿ ಕಾರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಜಿಲ್ಲೆಯಲ್ಲಿ ನೆಟೆ ರೋಗದಿಂದ ಸುಮಾರು 2 ಲಕ್ಷಕ್ಕೂ ಹೆಕ್ಟೇರ್ ಹೆಚ್ಚು ತೊಗರಿಬೆಳೆ ನಾಶವಾಗಿದ್ದು, ಇದರಿಂದ ರೈತರು ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕೂಡಲೇ ರೈತರಿಗೆ ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಅನುದಾನದಡಿ 35 ಕೋಟಿ ರೂ. ಘೋಷಿಸುವಂತೆ ಆಗ್ರಹಿಸಿ ಮುತ್ತಿಗೆ ಹಾಕಲು ಮುಂದಾಗಿದ್ದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ