ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಜವಹರಲಾಲ್ ನೆಹರು ಹಾಗೂ ಗಂಗಾಧರ ದೇಶಪಾಂಡೆ ಇಬ್ಬರೂ ಬೆಳಗಾವಿಗೆ ಗಾಂಧೀಜಿಯವರನ್ನು ಅಂದು ಕರೆದುಕೊಂಡು ಬಂದು. ಇಲ್ಲಿ ಅಂದು ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರನ್ನಾಗಿ ಮಾಡಿದರು. ಗಾಂಧಿ ಬಾವಿಯಿಂದಲೇ ಸ್ವಾತಂತ್ರ್ಯ ಚಳುವಳಿ ಆರಂಭವಾಯಿತು. ಅದೇ ರೀತಿ ಸಿಎಂ ಸಿದ್ದರಾಮಯ್ಯ, ಸುರ್ಜೇವಾಲಾ ಸೇರಿ ನಾವೆಲ್ಲರೂ ಇಲ್ಲಿನ ಗಾಂಧಿ ಬಾವಿ ನೀರಿನಿಂದಲೇ ಪ್ರಜಾಧ್ವನಿ ಕಾರ್ಯಕ್ರಮ ನಡೆಸಿದ್ದೆವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಗಾಂಧಿ ಬಾವಿ ನೀರನ್ನು ಚೆಲ್ಲಿ ಕಸ ಗುಡಿಸಿ ಸ್ವಚ್ಛತೆ ಮಾಡಿದ್ದರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ 136 ಸೀಟು ಗೆಲ್ಲುವಂತಾಯಿತು. ಅದೇರೀತಿ ಮುಂದಿನ ದಿನಗಳಲ್ಲಿ ರಾಜ್ಯದ ಹಾಗೂ ದೇಶದ ಭವಿಷ್ಯವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯಬೇಕು ಎಂಬುದನ್ನು ತೀರ್ಮಾನಿಸುವ ನಿಟ್ಟಿನಲ್ಲಿ ಈ ಸಮಾವೇಶ ನಡೆಯಲಿದೆ. ಗಾಂಧಿ ಭಾರತ ಕಾರ್ಯಕ್ರಮ ಪಕ್ಷಾತೀತ ಕಾರ್ಯಕ್ರಮ ಎಂದು ಹೇಳಿದರು.
ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ ಅವರನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ