Belagavi NewsBelgaum News
*ಬಿಜೆಪಿ ಬೆಳಗಾವಿ ಚಲೋಗೆ ಪರ್ಮಿಷನ್ ಕೊಡಲ್ಲ: ಅದಕ್ಕೂ ಮೀರಿ ಮುಂದಾದರೆ ಕಾನೂನು ಕ್ರಮ: ಗೃಹ ಸಚಿವರ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಬೆಳಗಾವಿ ಚಲೋ ಹೋರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿಯವರ ಬೆಳಗಾವಿ ಚಲೋಗೆ ಯಾವುದೇ ಕಾರಣಕ್ಕೂ ಪರ್ಮಿಷನ್ ಕೊಡಲ್ಲ ಎಂದು ಹೇಳಿದ್ದೇವೆ. ಅದಕ್ಕೂ ಮೀರಿ ಅವರು ಮಾಡಿದರೆ ಕಾನೂನು ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಕಾನೂನು ವ್ಯವಸ್ಥೆ ನಾವು ಸರಿ ಮಾಡುತ್ತೇವೆ. ಈಗಾಗಲೇ ಬಿಜೆಪಿಗೆ ಬೆಳಗಾವಿ ಚಲೋಗೆ ಅನುಮತಿ ಕೊಡುವುದಿಲ್ಲ ಎಂದು ತಿಳಿಸಲಾಗಿದೆ. ಆದಾಗ್ಯೂ ಇಂತಹ ಕೆಲಸಕ್ಕೆ ಮುಂದಾದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಿ.ಟಿ ರವಿ ಬಂಧನ ವಿಚಾರವಾಗಿ ರಾಜ್ಯ ಬಿಜೆಪಿ ಬೆಳಗಾವಿ ಚಲೋ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಬೆಳಗಾವಿ ಕಾಂಗ್ರೆಸ್ ಅಧಿವೇಶನ ಸಂದರ್ಭದಲ್ಲೇ ಬಿಜೆಪಿ ಹೋರಾಟಕ್ಕೆ ಮುಂದಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ