Karnataka News

*ಹಾಸ್ಟೇಲ್ ಕೊಠಡಿಯ ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಹೊರವಲಯದಲ್ಲಿ ನಡೆದಿದೆ.

17 ವರ್ಷದ ಬಿಂದುಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಚಿಕ್ಕಬಳ್ಳಾಪುರ ಮೂಲದ ಬಿಂದುಶ್ರೀ ಕೋಲಾರದ ಶ್ರೀನಿವಾಸಪುರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು.

Home add -Advt

ಏಕಾಏಕಿ ಹಾಸ್ಟೇಲ್ ಕೊಠಡಿಯಲ್ಲಿ ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button