ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ರಾಮಸುಬ್ರಮಣಿಯನ್ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರಾಗಿ ನೇಮಿಸಲಾಗಿದೆ.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ಅರುಣ್ ಕುಮಾರ್ ಮಿಶ್ರಾ ಅವರು ಕಳೆದ ಜೂ.1 ರಂದು ಎನ್‌ಎಚ್‌ಆರ್‌ಸಿ ಅಧ್ಯಕ್ಷರಾಗಿ ತಮ್ಮ ಅಧಿಕಾರಾವಧಿಯನ್ನು ಮುಕ್ತಾಯಗೊಳಿಸಿದ ನಂತರದಲ್ಲಿ ಈ ಹುದ್ದೆ ಖಾಲಿ ಉಳಿದಿತ್ತು. ಮಿಶ್ರಾ ಅವರ ನಿವೃತ್ತಿಯ ನಂತರ, ವಿಜಯ ಭಾರತಿ ಸಯಾನಿ ಅವರು ಮಾನವ ಹಕ್ಕುಗಳ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿದ್ದರು. ಇಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ನೇಮಕ ಮಾಡಿದರು.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಸರ್ಕಾರ ಮತ್ತು ಸಾರ್ವಜನಿಕ ಸೇವಕರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತನಿಖೆ ಮಾಡುವ ನೋಡಲ್ ಸಂಸ್ಥೆಯಾಗಿದೆ. NHRCನ ಮುಖ್ಯಸ್ಥರ ಆಯ್ಕೆ ಸಂಬಂಧ ಡಿ.18ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪಾಲ್ಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ