Film & Entertainment

*ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ: ಶಿವಣ್ಣನ ಆರೋಗ್ಯ ಹೇಗಿದೆ? ವೈದ್ಯರಿಂದಲೇ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದು, ಸದ್ಯ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಈ ಬಗ್ಗೆ ಸ್ವತಃ ವೈದ್ಯರೇ ಮಾಹಿತಿ ನೀಡಿದ್ದಾರೆ.

ಶಿವರಾಜ್ ಕುಮಾರ್ ಭಾವ, ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಡಿಯೋ ಹಂಚಿಕೊಂಡಿದ್ದು, ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಅವರು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ ಮತ್ತು ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ.

ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಿವರಾಜ್ ಕುಮಾರ್ ದೈಹಿಕವಾಗಿ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಡಾ.ಮನೋಹರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button