ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಖಾನಾಪುರ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮಂಜುನಾಥ್ ನಾಯಕ್ ಅಮಾನತುಗೊಂಡಿರುವ ಸಿಪಿಐ. ಐಜಿಪಿ ವಿಕಾಸ್ ಕುಮಾರ್ ಸಿಪಿಐ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ನಾಯಕರನ್ನು ಠಾಣೆಯ ಒಳಗೆ ಬಿಟ್ಟಿದ್ದಕ್ಕೆ ಸಿಪಿಐ ಮಂಜುನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸಿ.ಟಿ.ರವಿ ಅವರನ್ನು ಬಂಧಿಸಿದ ಸಂದರ್ಭದಲ್ಲಿ ಬಿಜೆಪಿಯ ನಾಯಕರೆಲ್ಲ ಠಾಣೆಯಲ್ಲಿ ಕುಳಿತು ಸಭೆ ನಡೆಸಿದ ಫೋಟೋ ವೈರಲ್ ಆಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ