ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪೂಂಛ್ ನಲ್ಲಿ ಸಂಭವಿಸಿದ ಸೇನಾ ವಾಹನ ಭೀಕರ ಅಪಘಾತದಲ್ಲಿ ಕರ್ನಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಪೂಂಛ್ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಒಟ್ಟು ಐವರು ಯೋಧರು ಸಾವನ್ನಪ್ಪಿದ್ದಾರೆ. ಅವರಲ್ಲಿ ಮೂವರು ಯೋಧರು ಕರ್ನಾಟಕದವರಾಗಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬೆಳಗಾವಿಯ ಸಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ್ (45), ಉಡುಪಿ ಜಿಲ್ಲೆಯ ಕುಂದಾಪುರ ಬಳಿಯ ಕೋಟೇಶ್ವರದ ಬಿಜಾಡಿಯ ಅನೂಪ್ (33) ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಮಹೇಶ್ ಮರಿಗೊಂಡ (25) ಎಂದು ಗುರುತಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ