ಪ್ರಗತಿವಾಹಿನಿ ಸುದ್ದಿ: ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ