ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ನಡೆದಿದೆ.
ಅಪಘಾತದ ಭೀಕರತೆಗೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದರು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮತ್ತೆ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಮೃತರ ಗುರುತು ಪತ್ತೆಯಾಗಿಲ್ಲ. ಆದರೆ ಮೃತ ನಾಲ್ವರು ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ತಡಸ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ