*ಶನಿವಾರ ನಡೆಯಲಿದೆ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಶನಿವಾರ ನಡೆಯಲಿದೆ. ಈ ಕುರಿತು ಅಧಿಕೃತ ಮಾಹಿತಿಯನ್ನು ಶುಕ್ರವಾರ ತಿಳಿಸಲಾಗುವುದು ಎಂದು ಹೇಳಿದರು.
ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಏಮ್ಸ್ ನಿಂದ ಗುರುವಾರ ತಡರಾತ್ರಿ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸಕ್ಕೆ ತಲುಪಿದ್ದು ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ದಿವಂಗತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದು, 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲು ಸಜ್ಜಾಗಿದೆ. ಇದಲ್ಲದೆ, ದಿನದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ