ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಜಡಗನಹಳ್ಳಿಯಲ್ಲಿ ನಡೆದಿದೆ.
ನರಸಿಂಹ ಮೂರ್ತಿ (59) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕ. ಜಡಗನಹಳ್ಳಿ ಪ್ರೌಢ ಶಾಲೆಯ ಶಿಕ್ಷಕರಾಗಿದ್ದರು. ಜನವರಿ 15ರಂದು ಸೇವೆಯಿಂದ ನಿವೃತ್ತಿಯಾಗಲಿದ್ದರು. ಆದರೆ ಅಷ್ಟರಲ್ಲಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ.
10 ಕೋಟಿ ಮೌಲ್ಯದ ಜಮೀನನ್ನು ಸತೀಶ್ ಎಂಬುವವರು ಖರೀದಿಸುವುದಾಗಿ ಹೇಳಿ 10 ಲಕ್ಷ ಹಣ ಕೊಟ್ಟು ಅಗ್ರಿಮೆಂಟ್ ಮಾಡಿಸಿಕೊಂಡಿದ್ದರು. ಆದರೆ ಉಳಿದ ಹಣ ಕೊಡದೇ ಸತಾಯಿಸಿ ಜಮೀನು ಕಬಳಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಹಣ ಕೇಳಲು ಹೋದಾಗ ಧಮ್ಕಿ ಹಾಕಿ ಕಳುಹಿಸಿದ್ದಾರಂತೆ. ಇದರಿಂದ ಮನನೊಂದ ನರಸಿಂಹ ಮೂರ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ