ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದಾರರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿತ್ತು. ಈ ಪ್ರಕರನ ಸಂಬಂಧ ಇದೀಗ ಇಬ್ಬರು ಹೆಡ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಿ ಬೀದರ್ ಎಸ್ ಪಿ ಪ್ರದೀಪ್ ಗಂಟಿ ಆದೇಶ ಹೊರಡಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊತ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಡ್ ನೋಡಿದ ಕುಟುಂಬದವರು ತಕ್ಷಣ ಪೊಲೀಸ್ ಬೀದರ್ ನ ಗಾಂಧಿ ಬಜಾರ್ ನಲ್ಲಿರುವ ಪೊಲೀಸ್ ಠಾಣೆಗೆ ದೌಡಾಯಿಸಿ, ದೂರು ನೀಡಿದ್ದರು. ಸಚಿನ್ ಅವರನ್ನು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೇ ನಿರ್ಲಕ್ಷ್ಯ ವಹಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಘಟನೆಯಾದ ಕೆಲ ಹೊತ್ತಲ್ಲೇ ಸಚಿನ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿದಿದೆ. ಇದೀಗ ದೂರು ದಾಖಲಿಸಿಕೊಳ್ಳಲು ನಿರ್ಲಕ್ಷ್ಯ ಕರ್ತವ್ಯ ಲೋಪ ಆರೋಪದಲ್ಲಿ ಗಾಂಧಿ ಬಜಾರ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ರಾಜೇಶ್ ಹಾಗೂ ಶಾಮಲಾ ಎಂಬುವವರನ್ನು ಅಮಾನತು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ