Karnataka News

*ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕನಿಂದ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಲೈಂಗಿಕ ದೌರ್ಜನ್ಯ*

FIR ದಾಖಲು


ಪ್ರಗತಿವಾಹಿನಿ ಸುದ್ದಿ:
ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬಳ್ಳಾರಿ ವಿಮ್ಸ್ ಆಸ್ಪತೆಯ ಆಡಳಿತ ವಿಭಾಗದಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ವಿ.ಕೆ.ವೆಂಕಟೇಶ್ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದು ಎಫ್ ಐ ಆರ್ ದಾಖಲಾಗಿದೆ. ಮಹಿಳಾ ಕಂಪ್ಯೂಟರ್ ಆಪರೇಟರ್ ವಿ.ಕೆ.ವೆಂಕಟೇಶ್ ಪದೇ ಪದೇ ನನ್ನನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸದಿದ್ದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ದೂರಿನ ಮೇರೆಗೆ ವಿ.ಕೆ.ವೆಂಕಟೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button