Belagavi NewsBelgaum NewsKannada NewsKarnataka NewsNational

*ಬೆಳಗಾವಿ ಸೇರಿದಂತೆ 8 ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಳಗಾವಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.

ಬೆಳಗಾವಿ, ಚಿಕ್ಕಮಗಳೂರು, ಬೀದರ್, ರಾಯಚೂರು, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. 

ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು ಮನೆ. ಗದಗ-ಬೆಟಗೇರಿ ನಗರಸಭೆ ಎಇಇ ಆರ್​ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ‌‌ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ

ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್​ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ. ಹುಚ್ಚೇಶ್ ಬಂಡಿವಡ್ಡರ್ ಅವರ​ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button