ಪ್ರಗತಿವಾಹಿನಿ ಸುದ್ದಿ: ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಂದೆ ಶರಣಾಗತರಾಗಿದ್ದಾರೆ.
ಚಿಕ್ಕಮಗಳೂರಿನ ಕಾಡಿನಲ್ಲಿ ಅಡಗಿದ್ದ 6 ನಕ್ಸಲರು ಇಂದು ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಪರಮೇಶ್ವರ್ ಮುಂದೆ ಶರಣಾಗಿದ್ದಾರೆ. ಇದು ಕರ್ನಾಟಕದ ಇತಿಹಾಸದಲ್ಲಿಯೇ ಅತಿ ದೊಡ್ಡ ಮತ್ಟದಲ್ಲಿ ನಡೆದ ನಕ್ಸಲರ ಗುಂಪಿನನಾಯಕರ ಶರಣಾಗತಿಯಾಗಿದೆ.
ನಕ್ಸಲರಾದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗಿದ್ದಾರೆ.
ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್ ಬಳಿಕ ನಕ್ಸಲರು ಶರಣಾಗುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ನಕ್ಸಲರು ಮುಖ್ಯವಾಹಿನಿಗೆ ಬರುವುದಾದರೆ ಆರ್ಥಿಕ, ಕಾನೂನು ನೆರವು ನೀಡುವುದಾಗಿ ಘೋಷಿಸಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ