Kannada NewsKarnataka NewsNational

*ಕಬ್ಬಿಣ ತಯಾರಿಕಾ ಘಟಕದಲ್ಲಿ ದುರಂತ: 30ಕ್ಕೂ ಹೆಚ್ಚು ಕಾರ್ಮಿಕರ ಸಾವು*

ಪ್ರಗತಿವಾಹಿನಿ ಸುದ್ದಿ: ಕಬ್ಬಿಣ ತಯಾರಿಸುವ ಘಟಕದ ಚಿಮಣಿ ಕುಸಿದು 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಅವಘಡ ಛತ್ತೀಸ್‌ಗಢ ಮುಂಗ್ಲಿ ಜಿಲ್ಲೆಯಲ್ಲಿ ಸಂಭವಿಸಿದೆ.

ಈ ಘಟನೆಯಲ್ಲಿ 30 ಜನ ಸಾವನ್ನಪ್ಪಿದರೆ ಕೆಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಮುಂಗೇಲಿಯ ಸರ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ‘ಕುಸುಮ್ ಹೆಸರಿನ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಚಿಮಣಿಯು ಇದ್ದಕ್ಕಿದ್ದಂತೆ ಸ್ಥಾವರದಲ್ಲಿ ಕುಸಿದು, ಅದರ ಅಡಿಯಲ್ಲಿ ಅನೇಕ ಜನರು ಸಿಲುಕಿಕೊಂಡರು. ಈ ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅವಶೇಷಗಳಡಿ ಸಿಲುಕಿರುವ ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದ್ದು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button