ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತದ ವತಿಯಿಂದ ಜನೇವರಿ 12 ಹಾಗೂ 13 ರಂದು ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಸಂಗೊಳ್ಳಿ ರಾಯಣ್ಣ ಉತ್ಸವದ ಪ್ರಯುಕ್ತ ಸಾರ್ವಜನಿಕ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಿನಾಂಕ:11-01-2025 ರ ಸಂಜೆ 6 ಗಂಟೆಯಿಂದ ದಿನಾಂಕ:14-01-2025ರ ಮುಂಜಾನೆ 6 ಗಂಟೆಯ ವರೆಗೆ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯ/ಬಾರ್ ಅಂಗಡಿಗಳನ್ನು ಬಂದ್ ಮಾಡಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ