Belagavi NewsBelgaum News

*ವೇದಿಕೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ್ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಖಾನಾಪುರ ತಾಲೂಕಿನ ಕಾರಲಗಾ ಗ್ರಾಮದ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶಾಲಾ ಆವರಣದಲ್ಲಿ ವೇದಿಕೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಮಕ್ಕಳು ಪಠ್ಯ ಚಟುವಟಿಕೆ ಜೊತೆ ಜೊತೆಗೇ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ದೈಹಿಕ ಬೆಳವಣಿಗೆಗೆ ಕ್ರೀಡೆ ಕೂಡ ಮಹತ್ವ. ಮೊಬೈಲ್ ಗೀಳಿನಿಂದ ಹೊರಬಂದು ಮೈದಾನದಲ್ಲಿ ಆಟವಾಡಬೇಕು. ಅಂದಾಗ ಮಾತ್ರ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ಮೃಣಾಲ ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದಲ್ಲಿ ಖಾನಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಗಾಡೆ, ಪಕ್ಷದ ಮುಖಂಡರಾದ ಯಶವಂತ ಬಿರ್ಜೆ, ವಿನಾಯಕ ಮುತಗೇಕರ್, ವಾಯ್.ಎನ್.ಮಜುಕರ್ ಉಪಸ್ಥಿತರಿದ್ದರು.

Home add -Advt

Related Articles

Back to top button