Film & Entertainment

*ಖ್ಯಾತ ಗಾಯಕ ಪಿ.ಜಯಚಂದ್ರನ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಲೆಜೆಂಡರಿ ಮಲಯಾಳಂ ಗಾಯಕ, ನಟ ಪಿ.ಜಯಚಂದ್ರನ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆ ಜೊತೆಗೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಗಾಯಕ ಪಿ.ಜಯಚಂದ್ರನ್ ತ್ರಿಶೂರ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕನ್ನಡ, ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕರಾಗಿದ್ದ ಜಯಚಂದ್ರನ್, 16,000ಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದರು.

ಜಯಚಂದ್ರನ್ ಕನ್ನಡದ ಹಿಂದೂಸ್ತಾನವು ಎಂದೂ ಮರೆಯದ…, ಒಲವಿನ ಉಡುಗೊರೆ ಕೊಡಲೇನು….ಮಂದಾರ ಪುಷ್ಪವು ನೀನು…, ಉಪ್ಪಿನ ಸಾಗರಕು…, ಭೂಮಿ ತಾಯಾಣೆ…ಜೀವನ ಸಂಜೀವನ…ಸೇರಿದಂತೆ ಹಲವು ಜನಪ್ರಿಯ ಗೀತೆಗಳಿಗೆ ಧ್ವನಿಯಾಗಿದ್ದರು.

ಕೇರಳ ಚಲನಚಿತ್ರರಂಗದಲ್ಲಿ ಆರು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲಾವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. 1944, ಮಾರ್ಚ್ 3ರಂದು ಕೊಚ್ಚಿಯ ರವಿಪುರಂ ನಲ್ಲಿ ಜನಿಸಿದ್ದ ಜಯಚಂದ್ರನ್ ಗಾಯಕರಾಗಿ ಜನಪ್ರಿಯತೆ ಪಡೆದುಕೊಂಡಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button