Karnataka News

*ಕೋರ್ಟ್ ನಲ್ಲಿ ಮುಖಾಮುಖಿಯಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡ: ನ್ಯಾಯಾಲಯಕ್ಕೆ ಹಾಜರಾದ ಕೊಲೆ ಆರೋಪಿಗಳು*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ 52ನೇ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದಾರೆ.

ಎಲ್ಲಾ ಆರೋಪಿಗಳಿಗೆ ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದ್ದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಹಾಗೂ ಗ್ಯಾಂಗ್ ಕೋರ್ಟ್ ಗೆ ಹಾಜರಾಗಿದ್ದಾರೆ. ಈ ವೇಳೆ ಕೋರ್ಟ್ ಹಾಲ್ ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಮುಖಾಮುಖಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಸೇರಿದ 6 ತಿಂಗಳ ಬಳಿಕ ದರ್ಶನ್ ಹಾಗೂ ಪವಿತ್ರಾಗೌಡ ಕೋರ್ಟ್ ಆವರ್ನದಲ್ಲಿ ಮುಖಾಮುಖಿಯಾಗಿದ್ದಾರೆ.

ನಟ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ ಸೇರಿ ಎಲ್ಲಾ 17 ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ. ಈ ವೇಳೆ ನ್ಯಯಾಲಯ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button