ಪ್ರಗತಿವಾಹಿನಿ ಸುದ್ದಿ: ಅಮೆರಿಕಾದ ಲಾಸ್ ಏಂಜಲಿಸ್ ನಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, 10ಕ್ಕೂ ಹೆಚ್ಚು ಜನರು ಸಾವನ್ನಪಿದ್ದು, ಹಲವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಲಾಸ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚು ಕ್ಷಣ ಕ್ಷಣಕ್ಕೂ ವ್ಯಾಪಿಸುತ್ತಲೇ ಇದ್ದು, ಸಾವಿರಾರು ಎಕರೆ ಪ್ರದೇಶ ಈಗಾಗಲೇ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಬೆಂಕಿಯ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮಿದ್ದು, ಸುತ್ತಮುತ್ತಲಿನ ಹಾಲಿವುಡ್ ಪ್ರದೇಶಗಳಿಗೂ ಬೆಂಕಿ ತಗುಲಿದೆ.
ಘಟನೆಯಲ್ಲಿ 2000ಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮವಾಗಿವೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಹಾಲಿವುಡ್, ಬಾಲಿವುಡ್ ನಟ-ನಟಿಯರಿಗೆ ಶೂಟಿಂಗ್ ಸ್ಥಗಿತಗೊಳಿಸಿ ಸ್ಥಳದಿಂದ ಹೊರಡುವಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ