ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
ಈ ಸಂಬಂಧ ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ ಸಿಎಂ ಪತ್ರ ಬರೆದಿದ್ದಾರೆ. ಈ ವಿಷಯ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಬಂದಿತ್ತು. ಬಿಜೆಪಿಯ ಮಹಾಂತೇಶ ಕವಟಗಿಮಠ ವಿಧಾನಪರಿಷತ್ತಿನಲ್ಲಿ ಪ್ರಶ್ನಿಸಿದ್ದರು.
ಇದಕ್ಕೆ ಉತ್ತರಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ತಿರಸ್ಕರಿಸಿದೆ. ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದ್ದರು. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ 3 ದಿನಗಳ ಹಿಂದೆ ಪ್ರಸ್ತಾಪಿಸಿ, ಕೇಂದ್ರಕ್ಕೆ ಪತ್ರ ಬರೆಯುವಂತೆ ಕುಮಾರಸ್ವಾಮಿಗೆ ಸಲಹೆ ನೀಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ