ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಮೇಲ್ಮ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಜನವರಿ 14 ರಿಂದ 2 ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗ್ನೆಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಈಗ ನೈಋತ್ಯ ಮತ್ತು ಪಕ್ಕದ ಆಗ್ನೆಯ ಬಂಗಾಳ ಕೊಲ್ಲಿಯ ಮೇಲೆ ಇದ್ದು ಸಮುದ್ರ ಮಟ್ಟದಿಂದ 3.1 ಕಿ.ಮೀ ವರೆಗೆ ವಿಸ್ತರಿಸಿದೆ. ಇದರಿಂದ ಜನವರಿ 14 ಮತ್ತು 15 ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕರ್ನಾಟಕ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಮಳೆ ಪ್ರಾರಂಭವಾಗಿ, ಹಾಸನ, ಕೊಡಗು, ಮಂಡ್ಯ ಮೈಸೂರು ಹಾಗೂ ತುಮಕೂರಿಗೆ ಮಳೆ ವಿಸ್ತರಿಸಲಿದೆ. ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ