ಪ್ರಗತಿವಾಹಿನಿ ಸುದ್ದಿ: ಖ್ಯಾತ ಪತ್ರಿಕಾ ಛಾಯಾಗ್ರಾಹಕ ನಂದನ್ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.
ಶಿವಮೊಗ್ಗದ ನಿವಾಸದಲ್ಲಿದ್ದ ನಂದನ್ ಅವರಿಗೆ ತಡರಾತ್ರಿ 1:30ರ ಸುಮಾರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ ನಂದನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಹಲವು ವರ್ಷಗಳಿಂದ ಶಿವಮೊಗ್ಗ ನಗರದಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿ ಗುರುತಿಸಿಕೊಂಡಿದ್ದರು. ಅವರು ತೆಗೆದ ಛಾಯಾಚಿತ್ರಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ, ಗೌರವಗಳಿಗೆ ಪಾತ್ರವಾಗಿದ್ದವು. ಹಲವಾರು ಪತ್ರಿಕೆಗಳಿಗೆ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ