ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲನ್ನು ಕೊಯ್ದು ವಿಕೃತಿ ಮೆರೆದಿದ್ದಾರೆ. ಘಟನೆ ಬೆನ್ನಲ್ಲೇ ಕಿಡಿಗೇಡಿಗಳ ವಿರುದ್ಧ ಕಾಟನ್ ಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಾಣಿಹಿಂಸಾ ತಡೆ ಕಾಯ್ದೆಯಡಿ ದುಷ್ಕರ್ಮಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದು ಕ್ರೌರ್ಯ ಮೆರೆದಿದ್ದಾರೆ. ಕೃತ್ಯದ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶವ್ಯಕವಾಗಿದ್ದು, ಈ ನಡುವೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ