ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ 2024ನೇ ಸಾಲಿನ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್,ಕೆ.ಎಚ್.ಮುನಿಯಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪದಾಧಿಕಾರಿಗಳು, ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ