Belagavi NewsBelgaum NewsPolitics

*ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಗೆ ಚಿಕಿತ್ಸೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌

Home add -Advt

ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಗಾಯವಾಗಿದ್ದು, ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.‌ ಈಗಾಗಾಲೆ ಚನ್ನರಾಜ ಹಟ್ಟಿಹೊಳಿ ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.‌ ಕಾರ್ ನಲ್ಲಿ ಇದ್ದ ಗನ್ ಮ್ಯಾನ್ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರು ಕೂಡಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡಾ ಮುಂದಿನ ಎರಡು ದಿನದಲ್ಲಿ ಡಿಸ್ಚಾರ್ಜ ಆಗಿ ಮನೆಗೆ ಹೋಗುತ್ತಾರೆ ಎಂದು ವೈದ್ಯ ಡಾ. ರವಿ ಪಾಟೀಲ್ ಅವರು ತಿಳಿಸಿದ್ದಾರೆ. ಇನ್ನು, ಅಪಘಾತದ ಸುದ್ದಿ ತಿಳಿಯುತ್ತಿದಂತೆ ಆಸ್ಪತ್ರೆಗೆ ಕುಟುಂಬಸ್ಥರು ದೌಡಾಯಿಸಿದ್ದಾರೆ.

Related Articles

Back to top button