Politics

*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಹೊರಟ್ಟಿ, CM, DCM, ಗೃಹ ಸಚಿವರು*

ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಕರೆ ಮಾಡಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ತಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ಬೇಗ ಗುಣಮುಖರಾಗಲೆಂದು ಆಶಿರ್ವಾದ ಮಾಡಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಕರೆ ಮಾಡಿ ಮಾತನಾಡಿದ್ದಾರೆ ಎಂದು ತಿಳಿಸಿದರು.

Home add -Advt

ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸಂಪುಟ ಸಹೋದ್ಯೋಗಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ವಿಚಾರ ತಿಳಿಯಿತು.

ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಹೊರಟ್ಟಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಅರೋಗ್ಯ ವಿಚಾರಿಸಿದ್ದಾರೆ.

ದೂರವಾಣಿ ಕರೆ ಮಾಡಿದ ಹೊರಟ್ಟಿ, ಇಬ್ಬರೂ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.


Related Articles

Back to top button