ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಸರಿಗಮ ವಿಜಿ ಅವರನ್ನು ಯಶವಂತಪುರ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಚೇತರಿಕೆ ಕಂಡಿದ್ದ ಸರಿಗಮ ವಿಜಿ ಇಂದು ಆಸ್ಪತ್ರೆಯಲ್ಲಿಯೇ ವಿಧಿವಶರಾಗಿದ್ದಾರೆ.
ರಂಗಭೂಮಿ ಕಲಾವಿದರಾಗಿದ್ದ ಸರಿಗಮ ವಿಜಿ, ‘ಸಂಸಾರದಲ್ಲಿ ಸರಿಗಮ’ ಎಂಬ ನಾಟಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. 80 ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು. ಕನ್ನಡ ಚಿತ್ರರಂಗದ ದಿಗ್ಗಜ ನಟರೊಂದಿಗೆ ಅಭಿನಯಿಸಿದ್ದ ಸರಿಗಮ ವಿಜಿ, ಹಲವು ಚಿತ್ರಗಳನ್ನು, ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದರು.
ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮ ವಿಜಿ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಚಾಮರಾಜಪೇಟೆ ಚಿತಾಗಾರದಲ್ಲಿ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ