*ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಈಗ ಹೇಗಿದೆ? ವೈದ್ಯರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯದ ಬಗ್ಗೆ ವೈದ್ಯ ಡಾ.ರವಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ರವಿ ಪಾಟೀಲ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೂ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಬೆನ್ನುಹುರಿಗೆ ಪೆಟ್ಟು ಬಿದ್ದಿರುವುದರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದರು.
ಇನ್ನು ಚನ್ನರಾಜ ಹಟ್ಟಿಹೊಳಿ ಅವರು ಗುಣಮುಖರಾಗುತ್ತಿದ್ದಾರೆ. ಇಬ್ಬರಿಗೂ ಯಾವುದೇ ಅಪಾಯವಿಲ್ಲ. ಸಚಿವರ ಗನ್ ಮ್ಯಾನ್ ಹಾಗೂ ಚಾಲಕ ಇಬ್ಬರಿಗೂ ಭುಜ ಹಾಗೂ ಕೈಗಳಿಗೆ ಗಾಯಗಳಾಗಿತ್ತು. ಅವರಿಗೂ ಚಿಕಿತ್ಸೆ ನೀಡಲಾಗಿದೆ ಎಂದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇನ್ನೂ ಹತ್ತು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕು. ಚನ್ನರಾಜ ಹಟ್ಟಿಹೊಳಿ ಅವರು ಒಂದು ವಾರ ವಿಶ್ರಾಂತಿ ಪಡೆಯಲು ಹೇಳಲಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಸಚಿವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.
ಸಚಿವರು ಇನ್ನೂ 3 ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ