ಪ್ರಗತಿವಾಹಿನಿ ಸುದ್ದಿ, ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಕಳ್ಳನೋರ್ವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಲ್ಲೆಯಿಂದ ಅವರು ಗಂಭೀರ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವೇ ಹೊತ್ತಿನಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ
ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದ. ಈ ವೇಳೆ ನಟನಿಗೆ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ. ಘಟನೆ ವೇಳೆ ನಟನ ಕುಟುಂಬಸ್ಥರು ಕೂಡ ಮನೆಯಲ್ಲಿದ್ದರು.
ಚಾಕು ಇರಿತದಿಂದ ನಟ ಸೈಫ್ ಅಲಿ ಖಾನ್ ಗಾಯಗೊಂಡಿದ್ದು, ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬೆನ್ನಲ್ಲೇ ನಟನ ಮನೆಗೆ ಬಾಂದ್ರಾ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ