ಪ್ರಗತಿವಾಹಿನಿ ಸುದ್ದಿ: 5 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಬಳ್ಳಾರಿಯಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ತೋರಣಗಲ್ ನಲ್ಲಿ ಪುಟ್ಟ ಬಾಲಕಿ ಮೇಲೆ 26 ವರ್ಷದ ಮಂಜುನಾಥ್ (26) ಅತ್ಯಾಚಾರವೆಸಗಿದ್ದಾನೆ. ಆತನನ್ನು ಕೊಪ್ಪಳದ ಹುಲಗಿಯಲ್ಲಿ ಬಂಧಿಸಲಾಗಿತ್ತು. ಪಂಚನಾಮೆಗೆಂದು ಕರೆತಂದಿದ್ದ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಪಿಎಸ್ ಐ ಡಾಕೇಶ್ ಆರೋಪಿಯ ಬಲಗಾಲಿಗೆ ಫೈರಿಂಗ್ ಮಾಡಿದ್ದು, ಗಾಯಾಳು ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಉಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ