Politics

*ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿ.ಟಿ.ರವಿ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಎಂಎಲ್ ಸಿ ಸಿಟಿ ರವಿ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ನೀದಲು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಸಿ.ಟಿ.ರವಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ಸಿ.ಟಿ.ರವಿಗೆ ನೋಟಿಸ್ ಜಾರಿ ಮಾಡಿದೆ. ಜನವರಿ 17ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Related Articles

Back to top button