ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ಇಂದು ಚಾಮರಾಜಪೇಟೆ ಬಳಿಯ ಚಿತಾಗಾರದಲ್ಲಿ ನಡೆದಿದೆ.
ಶ್ವಾಸಕೋಶದ ಸೋಂಕಿನಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಜಿ ಅವರು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸರಿಗಮ ವಿಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಬಳಿಕ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.
ಪುತ್ರ, ವಿಜಿ ದೇಹಕ್ಕೆ ಅಗ್ನಿಸ್ಪರ್ಶ ಮಾಡಿದರು. ಹಿರಿಯ ಕಲಾವಿದನ ನಿಧನಕ್ಕೆ ರಾಜಕೀಯ, ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ