*ಅಪಘಾತವಾಗಿ 3ನೇ ದಿನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಈಗ ಹೇಗಿದೆ? ವೈದ್ಯರಿಂದ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸದ್ಯದ ಆರೋಗ್ಯ ಸ್ಥಿತಿ ಬಗ್ಗೆ ಬೆಳಗಾವಿಯ ವಿಜಯ ಆಸ್ಪತ್ರೆ ವೈದ್ಯ ಡಾ.ರವಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ರವಿ ಪಾಟೀಲ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಅಪಘಾತವಾಗಿ ಇಂದಿಗೆ ಮೂರು ದಿನಗಳಾಗಿವೆ. ಇಬ್ಬರೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆನ್ನುಹುರಿಗೆ ಪೆಟ್ಟು ಬಿದ್ದಿರುವುದರಿಂದ 1 ತಿಂಗಳ ಕಾಲ ಬೆಡ್ ರೆಸ್ಟ್ ಗೆ ಸೂಚಿಸಿದ್ದೇವೆ ಎಂದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಿಕಿತ್ಸೆ ಮುಲಕ ದಿನದಿಂದ ದಿನಕ್ಕೆ ಗುಣಮುಖರಾಗುತ್ತಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಶೀಘ್ರವಾಗಿ ಗುಣಮುಖರಾದಲ್ಲಿ ಇನ್ನು 3-4 ದಿನದಲ್ಲಿ ಡಿಸ್ಚಾರ್ಜ್ ಮಾಡುತ್ತೇವೆ. ಈಗಗಾಲೇ ಚನ್ನರಾಜ್ ಹಟ್ಟಿಹೊಳಿಯವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ