ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಫೋಟೊ ಬಹಿರಂಗವಾಗಿದೆ.
ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿತ ಪ್ರಕರಣ ಸಂಬಂಧ ಇಬ್ಬರು ಶಂಕಿತರನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ ಎನ್ನಲಾಗಿದೆ. ಅವರಲ್ಲಿ ಓರ್ವ ಶಂಕಿತನ ಫೋಟೋ ವೈರಲ್ ಆಗಿದೆ.
ಶಂಕಿತ ಆರೋಪಿ ಸೈಫ್ ಅಲಿ ಖಾನ್ ವಾಸವಾಗಿರುವ ಅಪಾರ್ಟ್ ಮೆಂಟ್ ನ ಮೆಟ್ಟಿಲುಗಳನ್ನು ಇಳಿದು ಬರುತ್ತಿರುವ ವಿಡಿಯೋ ಹಾಗೂ ಫೋಟೋ ಬಹಿರಂಗವಾಗಿದೆ. ಟೀ-ಶರ್ಟ್ ಹಾಗೂ ಜೀನ್ಸ್ ಪ್ಯಾಂಟ್ ಧರಿಸಿರುವ ವ್ಯಕ್ತಿ ಮೆಟ್ಟಿಲುಗಳನ್ನು ಇಳಿದು ಬರುತ್ತಿರುವ ಫೋಟೋ ಲಭ್ಯವಾಗಿದೆ.
ಇನ್ನು ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಈ ನಡುವೆ ಚಾಕು ಇರಿದ ಆರೋಪಿಗಳ ಪತ್ತೆಗಾಗಿ ಮುಂಬೈ ಪೊಲೀಸರು 10 ವಿಶೇಷ ತಂಡ ರಚನೆ ಮಾಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ