Belagavi NewsBelgaum NewsPolitics

*ಸಚಿವ ಸತೀಶ್ ಜಾರಕಿಹೊಳಿಗೆ ನೋಟಿಸ್: ಕಾಂಗ್ರೆಸ್ ಉಸ್ತುವಾರಿ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ನೀಡಲಾಗಿದೆ ಎಂಬ ವದಂತಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ ಅವರು ತೆರೆ ಎಳೆದಿದ್ದಾರೆ. 

ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೋಟಿಸ್ ಬಗ್ಗೆ ನನಗೆ ಗೊತ್ತಿಲ್ಲ ಯಾರು ಈ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ. ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದರು. 

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದ್ರೆ ಇಲ್ಲೇಕೆ ಬರ್ತಿದ್ರು ಎಂದು ಸುರ್ಜೇವಾಲ ಪ್ರಶ್ನಿಸಿದರು.‌

ಈಗ ಮತ್ತೊಮ್ಮೆ ಜನವರಿ 21ರಂದು ಜೈ ಬಾಪು, ಜೈ ಭೀಮ, ಜೈ ಸಂವಿಧಾನ ಆಯೋಜಿಸಲಾಗಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿ ದೇಶದ ಎಲ್ಲಾ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

Home add -Advt

ಬೆಳಗಾವಿಯ ಐತಿಹಾಸಿಕ ಭೂಮಿಯ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಬಂಧ ದಶಕಗಳಿಂದ ಇದೆ. ಹಾಗಾಗಿ ಈಗ ಮತ್ತೊಮ್ಮೆ ಜನವರಿ 21 ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ್ಯಾಲಿ ಆಯೋಜಿಸಲಾಗಿದೆ. ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ್ಯಾಲಿ ಏಕೆ ಮಾಡಲಾಗುತ್ತಿದೆ? ಸಂಸತ್‌ನಲ್ಲಿ ದೇಶದ ಗೃಹಮಂತ್ರಿ ಅಮಿತ್ ಶಾ ಕೇವಲ ಡಾ.ಬಾಬಾಸಾಹೇಬ ಅಂಬೇಡ್ಕರ್ ಅಪಮಾನ ಮಾತ್ರ ಮಾಡಿಲ್ಲ. ಡಾ.ಬಾಬಾಸಾಹೇಬ ಅಂಬೇಡ್ಕರ್ ತತ್ವಗಳನ್ನು ನಂಬುವವರ ಬಗ್ಗೆ ಅಪಹಾಸ್ಯ ಮಾಡಿದ್ದಾರೆ. ಸಂವಿಧಾನಿಕ ಅಧಿಕಾರವನ್ನು ಬಿಜೆಪಿಯಿಂದ ಬುಲ್ಡೋಜರ್ ಕೆಳಗೆ ಹಿಸುಕಲಾಗುತ್ತಿದೆ. ಹೀಗಾಗಿ ಜನವರಿ 21ರಂದು ಬೆಳಗಾವಿಯಲ್ಲಿ ಜೈ ಬಾಪು ಜೈ ಭೀಮ ಸಂವಿಧಾನ ರ್ಯಾಲಿ ನಡೆಯಲಿದೆ ಬಳಿಕ ಜನವರಿ 27ರಂದು ಅಂಬೇಡ್ಕರ್ ಜನ್ಮಸ್ಥಾನ ಮಧ್ಯಪ್ರದೇಶದಲ್ಲಿ ರ್ಯಾಲಿ ನಡೆಯಲಿದೆ.‌

ಒಂದೆಡೆ ಡಾ.ಬಾಬಾಸಾಹೇಬ ಅಂಬೇಡ್ಕರ್ ರಿಗೆ ಅಪಮಾನ ಮಾಡ್ತಾರೆ. ಮತ್ತೊಂದೆಡೆ ದಲಿತರು, ಹಿಂದುಳಿದವರ, ಮಹಿಳೆಯರು, ಯುವಕರ ಅಧಿಕಾರ ಕಿತ್ತಕೊಳ್ಳುತ್ತಾರೆ. ಹೀಗಾಗಿ ದೇಶಾದ್ಯಂತ ಇಂದು ಹೊಸ ಕ್ರಾಂತಿ ಮಾಡುವ ಅವಶ್ಯಕತೆ ಇದೆ. ಹೀಗಾಗಿ ಬೆಳಗಾವಿಯಿಂದ ಹೊರಹೊಮ್ಮುವ ಧ್ವನಿ ದೇಶದ ರಾಜಕಾರಣಕ್ಕೆ ಹೊಸ ದಿಶೆ ನೀಡಲಿದೆ. 100 ವರ್ಷಗಳ ಮೊದಲು ಮಹಾತ್ಮ ಗಾಂಧಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾದಾಗ ಆಂಗ್ಲರ ಸರ್ಕಾರದಿಂದ ಸ್ವಾತಂತ್ರ್ಯ ಸಿಕ್ಕಿತ್ತು. ಈಗ 100 ವರ್ಷಗಳ ಮೇಲೆ ಭೇದಭಾವ, ಸಂವಿಧಾನ ಮೇಲೆ ದಾಳಿಯ ವಿರುದ್ಧ ಹೊಸ ಕ್ರಾಂತಿಗೆ ಸೂತ್ರವಾಗಲಿದೆ. ಇಂದು ಕೆಪಿಸಿಸಿ ಅಧ್ಯಕ್ಷರು ಬಂದು ಸಭೆ ಮಾಡಲಿದ್ದಾರೆ. ಬೆಳಗಾವಿಯ ಸಮಾವೇಶ ಐತಿಹಾಸಿಕವಾಗಲಿದೆ ಎಂದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button