ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ಯಾರೂ ಬಂದು ಅವರಿಗೆ ತೊಂದರೆ ಕೊಡಬೇಡಿ ಎಂದು ವೈದ್ಯರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಗೆ ಭೇಟಿ ನೀಡಿ, ಅವರ ಸಹೋದರನಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ನೀಡಿದ ಸ್ವಾಮೀಜಿಗಳು, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಂದ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ