ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಇಂದು ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಡಿಜಿಪಿ (ಅಪರಾಧ), ಐಜಿಪಿ, ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರ ಜೊತೆ ಹಾಜರಿದ್ದರು.
ಸಚಿವರು ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಲಾಯಿತು.
ಸಚಿವರು ಬ್ಯಾಂಕ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಮತ್ತು ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ