ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಉಪಚುನಾವಣೆ ಅಧಿಸೂಚನೆ ಹೊರಬೀಳುವ ಮುನ್ನವೇ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಡಿ.5ರಂದು ಉಪಚುನಾವಣೆ ನಡೆಯಲಿದ್ದು, ನ.11ರಂದು ಅಧಿಸೂಚನೆ ಹೊರಬೀಳಲಿದೆ. ಆದರೆ ಕಾಂಗ್ರೆಸ್ 8 ಕ್ಷೇತ್ರಗಳ ಅಭ್ಯರ್ಥಿಗಳನ್ನು ಮುಂಚಿತವಾಗಿಯೇ ಬಿಡುಗಡೆ ಮಾಡಿದೆ.
ಯಲ್ಲಾಪುರಕ್ಕೆ ಭೀಮಣ್ಣ ನಾಯಕ, ರಾಣೆಬೆನ್ನೂರಿಗೆ ಕೆ.ಬಿ.ಕೋಳಿವಾಡ, ಹಿರೇಕೆರೂರಿಗೆ ಬಿ.ಎಚ್.ಬೆಣ್ಣಿಕೋಡ್, ಚಿಕ್ಕಬಳ್ಳಾಪುರಕ್ಕೆ ಎಂ.ಆಂಜನಪ್ಪ, ಕೆಆರ್ ಪುರಕ್ಕೆ ಎಂ.ನಾರಾಯಣಸ್ವಾಮಿ, ಮಹಾಲಕ್ಷ್ಮಿ ಲೇಔಟ್ ಗೆ ಎಂ.ಶಿವರಾಜ್, ಹೊಸಕೋಟೆಗೆ ಪದ್ಮಾವತಿ ಸುರೇಶ, ಹುಣಸೂರಿಗೆ ಎಚ್.ಪಿ.ಮಂಜುನಾಥ ಅಭ್ಯರ್ಥಿಯಾಗಿದ್ದಾರೆ.
ಇನ್ನೂ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. ವಿಶೇಷವೆಂದರೆ ಈ ಹಿಂದೆ ಉಪಚುನಾವಣೆ ದಿನಾಂಕ ನಿಗದಿಯಾದ ಸಂದರ್ಭದಲ್ಲಿ ಬೆಳಗಾವಿಯ ಗೋಕಾಕ ಕ್ಷೇತ್ರದ ಅಭ್ಯರ್ಥಿ ಘೋಷಿಸಲಾಗಿತ್ತು. ಲಖನ್ ಜಾರಕಿಹೊಳಿ ಅಭ್ಯರ್ಥಿ ಎಂದು ಪ್ರಕಟಿಸಲಾಗಿತ್ತು. ಆದರೆ ಈ ಬಾರಿಯ ಮೊದ ಪಟ್ಟಿಯಲ್ಲಿ ಅವರ ಹೆಸರಿಲ್ಲದಿರುವುದು ಕುತೂಹಲ ಮೂಡಿಸಿದೆ.
ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡಕ್ಕೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ.
ಗೋಕಾಕ್ ಇಲೆಕ್ಷನ್ ಹೇಗೆ ಮಾಡಬೇಕು ನಮಗೆ ಗೊತ್ತಿದೆ -ಲಖನ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ