Politics

*ರಾಜಣ್ಣ ನೀನು ಮನುಸ್ಮೃತಿ ಓದು: ಸಿಎಂ ಸಿದ್ದರಾಮಯ್ಯ ಸಲಹೆ*

ಪ್ರಗತಿವಾಹಿನಿ ಸುದ್ದಿ: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು.

ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು “ಜಾತಿ-ಕೆಳ ಜಾತಿ” ಎನ್ನುವ ಪದ ಬಳಸಿದರು.

ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರೆದವರು, ಹಿಂದುಳಿದವರು ಎಂದು ಹೇಳಬಹುದು ಎಂದರು.

ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.

ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿಗಳು “ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು-ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕೆ ಹಾರಿಸಿ ಭಾಷಣ ಮುಂದುವರೆಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button